ಡಾ. ಲೋಕೇಶ ಎಂ.ಯು. ಮತ್ತು ಪವಿತ್ರ ಎ.ವಿ.
Category: | ಕನ್ನಡ |
Sub Category: | ಸಾಮಾಜಿಕ-ರಾಜಕೀಯ |
Author: | Dr Lokesh M - Pavitra A V |
Publisher: | ನಿರುತ ಪಬ್ಲಿಕೇಷನ್ಸ್ |
Language: | Kannada |
Number of pages : | |
Publication Year: | |
Weight | |
ISBN | |
Book type | Paperback |
Delivery between 2-8 Days
No returns accepted. Please refer our full policy
Your payments are 100% secure
20ನೇ ಶತಮಾನದಲ್ಲಿ ಆರಂಭಗೊಂಡ ನೂತನ ಜ್ಞಾನ ಶಾಖೆಯಾದ ಸಮಾಜಕಾರ್ಯ ವೃತ್ತಿಪರರಿಗೆ ವೈವಿಧ್ಯಮಯ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸಲು ಅವಕಾಶವನ್ನು ಒದಗಿಸುವ ಬಹುಮುಖ ವೃತ್ತಿಯಾಗಿದೆ. ಪ್ರಸ್ತುತ ಸಮಾಜಕಾರ್ಯ ವೃತ್ತಿಯು ಆರೋಗ್ಯ ಕ್ಷೇತ್ರದಲ್ಲಿ ಗಣನೀಯ ಪಾತ್ರ ವಹಿಸುತ್ತಿದ್ದು, ಮಾನಸಿಕ ಆರೋಗ್ಯ ರಕ್ಷಣೆಯಲ್ಲೂ ತನ್ನದೇ ಆದ ಮಹತ್ವದ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಆಧುನಿಕ ಸಮಾಜದಲ್ಲಿ ನಾನಾ ಕಾರಣಗಳಿಂದ ಮನೋವ್ಯಾಕುಲಕ್ಕೆ ಒಳಗಾಗುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿರುವುದು ಹಾಗೂ ಅದರಲ್ಲಿರುವ ಸಂಕೀರ್ಣತೆಯ ಸವಾಲುಗಳು ದಿನೇ ದಿನೇ ಅಧಿಕವಾಗುತ್ತಿರುವುದು ಮಾನಸಿಕ ಆರೋಗ್ಯ ಕ್ಷೇತ್ರದಲ್ಲಿ ವೃತ್ತಿಪರ ಸಮಾಜಕಾರ್ಯಕರ್ತರ ಅಗತ್ಯತೆಯನ್ನು ಎತ್ತಿ ತೋರಿಸುತ್ತದೆ.
ಇಂದು ಸಮಾಜಕಾರ್ಯ ತನ್ನ ವ್ಯಾಪ್ತಿಯನ್ನು ವಿವಿಧ ಕ್ಷೇತ್ರಗಳಿಗೆ ವಿಸ್ತರಿಸಿಕೊಂಡಿದೆ. ಈ ಹಿಂದೆ ಸಮಾಜಕಾರ್ಯ ವೃತ್ತಿಪರರ ಸೇವೆಗಳು ಸಮುದಾಯ ಆಧಾರಿತ ಕಾರ್ಯಕ್ರಮಗಳು ತರಬೇತಿ, ಅನುಷ್ಠಾನ, ಆಪ್ತ ಸಮಾಲೋಚನೆ, ಸಮಾಜಕಾರ್ಯದ ವಿವಿಧ ವಿಧಾನಗಳು/ತಂತ್ರಗಳ ಬಳಕೆ ಹಾಗೂ ಸಂಶೋಧನೆಗಳಿಗೆ ಸೀಮಿತವಾಗಿದ್ದವು. ಪ್ರಸ್ತುತ ಇವರ ಸೇವೆಗಳು ಮಾನಸಿಕ ಆರೋಗ್ಯ ಕ್ಷೇತ್ರಕ್ಕೂ ವಿಸ್ತರಿಸಿದ್ದು, ಮನೋ-ರೋಗಿಗಳನ್ನು ಚಿಕಿತ್ಸೆ ಮಾಡುವಲ್ಲಿ ಬಹುಮುಖ್ಯ ಪಾತ್ರವಹಿಸುವ ಬಹುತಜ್ಞರ ಚಿಕಿತ್ಸಾ ತಂಡದಲ್ಲಿ ಮನೋ-ವೈದ್ಯಕೀಯ ಸಮಾಜಕಾರ್ಯಕರ್ತರ ಪಾತ್ರ ನಿರ್ಣಾಯಕವಾದುದಾಗಿದೆ. ಬಹುಮುಖ್ಯವಾಗಿ ಮಾನಸಿಕ ಆರೋಗ್ಯ ಉತ್ತೇಜಕ ಕಾರ್ಯಕ್ರಮಗಳು, ಮಾನಸಿಕ ಆರೋಗ್ಯ ಸಮಸ್ಯೆಗಳ ತಡೆಗಟ್ಟುವಿಕೆ, ಚಿಕಿತ್ಸಕ ಮಧ್ಯಸ್ಥಿಕೆಗಳು, ಪುನರ್ವಸತಿ ಸೇವೆಗಳು ಮತ್ತು ಮಾನಸಿಕ ರೋಗಿಗಳನ್ನು ಕುಟುಂಬಕ್ಕೆ ಮರುಜೋಡಿಸುವಲ್ಲಿ ಹಾಗೂ ಸಮುದಾಯದ ಮುಖ್ಯವಾಹಿನಿಗೆ ತರುವಲ್ಲಿ ವೃತ್ತಿಪರ ಮನೋ-ವೈದ್ಯಕೀಯ ಸಮಾಜಕಾರ್ಯಕರ್ತರ ಕೊಡುಗೆ ಗಣನೀಯವಾದುದು.
Dr Lokesh M - Pavitra A V |
0 average based on 0 reviews.