ಭಾರತದ ಅರಸುಗಳಲ್ಲಿ ಶ್ರೀಕೃಷ್ಣದೇವರಾಯನಿಗೆ ವಿಶಿಷ್ಟವಾದ ಸ್ಥಾನವಿದೆ. ಸಮರ್ಥ ಆಡಳಿತಗಾರ, ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ; ಕಲೆ,ಸಾಹಿತ್ಯ ರಂಗಗಳ ಪೋಷಕ; ತಾನು ವೈಷ್ಣವ ಧರ್ಮವನ್ನು ಅನುಸರಿಸಿದರೂ ಇತರ ಧರ್ಮಗಳ ಬಗ್ಗೆ ಒಬ್ಬ ರಾಜ ನಡೆದುಕೊಳ್ಳುವ ರೀತಿಯಲ್ಲಿ ನಡೆದುಕೊಂಡ ಸಂಯಮಿ. ತನ್ನನ್ನು ಕನ್ನಡ ರಾಯನೆಂದು ಕರೆಸಿಕೊಂಡ ಭಾಷಾಪ್ರೇಮಿ. ಯವನ ರಾಜ್ಯ ಸ್ಥಾಪಕನೆಂಬ ಬಿರುದನ್ನು ಪಡೆದ ರಣಧೀರ. ಬಹುಶಃ ಈತನ ಬಗ್ಗೆ ಪ್ರಚಲಿತದಲ್ಲಿರುವಷ್ಟು ದಂತಕಥೆಗಳು ಬೇರಾವ ರಾಜನ ಬಗ್ಗೆಯೂ ಇಲ್ಲ. ಹೀಗೆ ಇಂದಿಗೂ ಜನಮಾನಸದಲ್ಲಿ ನೆಲಸಿರುವ ವರ್ಣರಂಜಿತ ಐತಿಹಾಸಿಕ ವ್ಯಕ್ತಿ ಶ್ರೀಕೃಷ್ಣದೇವರಾಯ. ಈ ಕಾದಂಬರಿಯಲ್ಲಿ ಮಿತ್ರ ಶ್ರೀ ಸು.ರುದ್ರಮೂರ್ತಿಶಾಸ್ತ್ರಿ ಶ್ರೀಕೃಷ್ಣದೇವರಾಯನ ಚರಿತ್ರೆಯನ್ನು ನಿರೂಪಿಸುವುದಕ್ಕಿಂತಲೂ ಆತನ ಚಾರಿತ್ರ್ಯವನ್ನು ನಿರೂಪಿಸುವುದರತ್ತ ಹೆಚ್ಚು ಗಮನಹರಿಸಿದ್ದಾರೆ. ಶ್ರೀಕೃಷ್ಣದೇವರಾಯ ಈ ಕಾದಂಬರಿಯ ಪ್ರಧಾನ ಪಾತ್ರ. ಆದರೆ ಎಲ್ಲ ಪಾತ್ರಗಳ ಒಳಹೊರ ಚಾರಿತ್ರ್ಯಗಳನ್ನು ಗಮನಿಸಿ ಎಲ್ಲ ಪಾತ್ರಗಳನ್ನೂ ನಮ್ಮ ಮುಂದಿರಿಸಿದ್ದಾರೆ. ಬಹುಶಃ ಈ ಕಾರಣದಿಂದ ಶ್ರೀಕೃಷ್ಣದೇವರಾಯನ ಬದುಕಿನ ಸುತ್ತ ಹೆಣೆದುಕೊಂಡಿರುವ ಹಲವಾರು ಅಸಂಗತಗಳು ತಮ್ಮಷ್ಟಕ್ಕೆ ತಾವೇ ಕಳಚಿಕೊಂಡಿವೆ. ಆ ಕಾಲದ ಆಂತರಂಗಿಕ ಗೂಢಚರ್ಯೆ, ಅಧಿಕಾರ ದಾಹದ ಪಿತೂರಿಗಳು, ಉಪಾಯಗಳಿಗೆ ಪ್ರತ್ಯುಪಾಯಗಳು ಮುಂತಾದ ಕುತೂಹಲ ಮೂಡಿಸುವ ಪ್ರಸಂಗಗಳೂ ಹಿತವಾಗಿ ಮೂಡಿಬಂದಿವೆ. ಇವೆಲ್ಲವೂ ಆ ಪಾತ್ರಗಳ ವ್ಯಕ್ತಿತ್ವವನ್ನು ಆವಿಷ್ಕರಿಸುವಲ್ಲಿ ಸಹಕಾರಿಯಾಗಿವೆ.
#
nil
ಸ್ಟಾಕ್ ಮಾರ್ಕೆಟ್‌ನಲ್ಲಿ ಹೂಡಿಕೆ ಮಾಡಲು ಬಯಸುತ್ತೀರಾ ಆದರೆ ಎಲ್ಲಿಂದ ಪ್ರಾರಂಭಿಸಬೇಕೆಂದು ತಿಳಿದಿಲ್ಲವೇ? "ಶ್ರೀಮಂತರಾಗೋಣ ಬನ್ನಿ" ಅರುಣ್ ಕಿಲ್ಲೂರು ಅವರು ಯಶಸ್ವಿ ಹೂಡಿಕೆಗಾಗಿ ಪ್ರಾಯೋಗಿಕ ಮಾರ್ಗದರ್ಶನ ಮತ್ತು ಸಲಹೆಗಳನ್ನು ನೀಡುತ್ತಾರೆ. ನಿಮ್ಮ ಪ್ರತಿಯನ್ನು ಇಂದು ಪಡೆದುಕೊಳ್ಳಿ ಮತ್ತು ನಿಮ್ಮ ಆರ್ಥಿಕ ಭವಿಷ್ಯವನ್ನು ನಿರ್ಮಿಸಲು ಪ್ರಾರಂಭಿಸಿ!
Showing 3151 to 3180 of 3735 results