• ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ    
  • Call Us : +91 7022122121 / +91 8861212172
  • Free shipping above ₹499    
  • ಯಾವುದೇ ಕನ್ನಡ ಪುಸ್ತಕಕ್ಕಾಗಿ ಸಂಪರ್ಕಿಸಿ
  • Call Us: +91 7022122121 / +91 8861212172
  • Free shipping above ₹499
back

Publishers

Categories

Authors

Languages

Book Type

Clear All
Filter
ನರಕದ ಕೆನ್ನಾಲಿಗೆಯಂಥ ನಿನ್ನ ಬೆನ್ನಹುರಿ | Narakada Kennaaligeyantha Ninna Bennahuri

ಕವಿತೆಗೆ ಓದುಗರೇ ಇಲ್ಲವೆನ್ನುವವರ ಮುಂದೆ ಇಲ್ಲಿನ ಕವಿತೆಗಳನ್ನು ನಿಲ್ಲಿಸಬೇಕು. ಯಾಕೆಂದರೆ ಅಬ್ದುಲ್ ರಶೀದ್ ಅವರ ಕವಿತೆಗಳನ್ನು ಓದುವುದೇ ಒಂದು ಪರಮಸುಖ. ಅಷ್ಟು ತೀಕ್ಷ್ಮವಾದ ವೇಗ ಇಲ್ಲಿನ ಕವಿತೆಗಳಿಗಿವೆ. ಇಲ್ಲಿನ ಕವಿತೆಗಳು ಓದುಗನೊಳಗೆ ಹುದುಗಿರುವ ಕವಿಯನ್ನು ಬಡಿದೆಬ್ಬಿಸುವುದಂತು ನಿಜ!

₹130   ₹98

Buy Now
ನಾ ಸೆರೆ ಹಿಡಿದ ಕನ್ಯಾಸ್ತ್ರೀ | Na Sere Hidida Kanyastree

ಮನೆಯ ಎದುರೇ ಇರುವ ಹಸಿರುಕ್ಕುವ ಗದ್ದೆ ಬಯಲು ದಾಟಿ, ತೊರೆಯೊಂದರ ನೀರಿನಲ್ಲಿ ಕಾಲಾಡಿಸಿ, ಸನಿಹದ ಕಾಡಿನಲ್ಲಿ ನಡೆಯತೊಡಗಿದರೆ, ಸಿಹಿ ನೀರಿನ ಬುಗ್ಗೆ, ಹಾರುವ ಓತಿ, ಕನ್ಯಾಸ್ತ್ರೀ ಹೆಸರಿನ ಅಪರೂಪದ ಅಣಬೆ, ಬಕುಳದ ಹೂ, ಚೇಂಪಿ ಹಣ್ಣು – ಇವೆಲ್ಲವೂ ಕಾಣಸಿಗುತ್ತವೆ, ಆಪ್ತವಾಗುತ್ತವೆ. ಇಂತಹ ಅನುಭವಗಳಲ್ಲಿ ನೀವೂ ಭಾಗಿಯಾಗಬೇಕೆ? ಹಾಗಿದ್ದಲ್ಲಿ ಈ ಪುಸ್ತಕ ಓದಿ.

₹200   ₹170

Buy Now
ನಾ ಸೆರೆ ಹಿಡಿದ ಕನ್ಯಾಸ್ತ್ರೀ ಇಬುಕ್ | Naa Sere Hidida kanyaastri Ebook

ಮನೆಯ ಎದುರೇ ಇರುವ ಹಸಿರುಕ್ಕುವ ಗದ್ದೆ ಬಯಲು ದಾಟಿ, ತೊರೆಯೊಂದರ ನೀರಿನಲ್ಲಿ ಕಾಲಾಡಿಸಿ, ಸನಿಹದ ಕಾಡಿನಲ್ಲಿ ನಡೆಯತೊಡಗಿದರೆ, ಸಿಹಿ ನೀರಿನ ಬುಗ್ಗೆ, ಹಾರುವ ಓತಿ, ಕನ್ಯಾಸ್ತ್ರೀ ಹೆಸರಿನ ಅಪರೂಪದ ಅಣಬೆ, ಬಕುಳದ ಹೂ, ಚೇಂಪಿ ಹಣ್ಣು – ಇವೆಲ್ಲವೂ ಕಾಣಸಿಗುತ್ತವೆ, ಆಪ್ತವಾಗುತ್ತವೆ. ಇಂತಹ ಅನುಭವಗಳಲ್ಲಿ ನೀವೂ ಭಾಗಿಯಾಗಬೇಕೆ? ಹಾಗಿದ್ದಲ್ಲಿ ಈ ಪುಸ್ತಕ ಓದಿ.

₹200   ₹100

Buy Now
ನಾತಿಚರಾಮಿ | Naaticharami

‘ನಾತಿಚರಾಮಿ’ ನಿನ್ನ ಹೊರತಾಗಿ ಅಲ್ಲ ಎನ್ನುವ ಮಾತು ಮದುವೆಯ ಪ್ರಮಾಣದಲ್ಲಿ ಧರ್ಮ, ಅರ್ಥ, ಮೋಕ್ಷಗಳ ಜೊತೆಯಲ್ಲಿ ಕಾಮಕ್ಕೂ ಅನ್ವಯವಾಗುತ್ತದೆ ನಂಬಿಕೆ, ಭರವಸೆ ಆಗಬೇಕಿದ್ದ ಈ ಪ್ರಮಾಣ ಗೌರಿಯ ಪಾಲಿಗೆ ಒಂದು ಅಗೋಚರ ಬಂಧನವೂ ಆಗಿರುತ್ತದೆ. ಆ ಬಂಧನ ಕೇವಲ ಮಾಡಿದ ಆ ಪ್ರಮಾಣದ್ದಲ್ಲ, ಬಾಲ್ಯದಿಂದಲೂ ಸಮಾಜದಿಂದ ಕಲಿಸಲ್ಪಟ್ಟ ಸೋ ಕಾಲ್ಡ್ ಮೌಲ್ಯಗಳದ್ದು, ನಂಬಿಕೆಗಳದ್ದು, ನಿರೀಕ್ಷೆಗಳದ್ದು. ಗಂಡ ಬಿಟ್ಟು ಹೋದಮೇಲೆ ಸಹ ದಾಂಪತ್ಯದ ಈ ಪ್ರಮಾಣವನ್ನು ಕಳಚಿಕೊಳ್ಳುವುದು ಗೌರಿಗೆ ಸಲೀಸಲ್ಲ. ಇದು, ಗೌರಿ ಅವುಗಳನ್ನು ದಾಟುವ ಕಥೆ, ಆ ಮೂಲಕ ಬದುಕಿನ ಸಮೀಕರಣದಲ್ಲಿ ತನ್ನನ್ನು ತಾನು ಪಡೆದುಕೊಳ್ಳುವ ಕಥೆ

₹150   ₹119.98

Buy Now
ನಾತಿಚರಾಮಿ ಇಬುಕ್ | Naaticharami Ebook

‘ನಾತಿಚರಾಮಿ’ ನಿನ್ನ ಹೊರತಾಗಿ ಅಲ್ಲ ಎನ್ನುವ ಮಾತು ಮದುವೆಯ ಪ್ರಮಾಣದಲ್ಲಿ ಧರ್ಮ, ಅರ್ಥ, ಮೋಕ್ಷಗಳ ಜೊತೆಯಲ್ಲಿ ಕಾಮಕ್ಕೂ ಅನ್ವಯವಾಗುತ್ತದೆ

₹150   ₹75

Buy Now
ನಿಮಗೆಷ್ಟು ಹಣ ಬೇಕು | Nimageshtu Hana Beku

ಲೇಖಕರು, ಪತ್ರಕರ್ತರು ಆದ ಅನಂತ ಹುದೆಂಗಜೆ ಅವರು ಜನಸಾಮಾನ್ಯರ ನಾಡಿಮಿಡಿತವನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಸರಳ ಭಾಷೆ, ಶೈಲಿಯಲ್ಲಿ ಬರೆದಿರುವ ಪುಸ್ತಕವಿದು. ನಮ್ಮ ‘ಕನ್ನಡ ಮಾಣಿಕ್ಯ’ ಪತ್ರಿಕೆ ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ಬರೆದಿರುವ ಲೇಖನಗಳ ಸಂಕಲನವೇ ಇದಾಗಿದೆ. ಇದೂ ಕೂಡ ಹಣಕಾಸು, ಬ್ಯಾಂಕಿಂಗ್ ಕ್ಷೇತ್ರದ ವಿಚಾರಗಳ ಕುರಿತ ಪುಸ್ತಕವಾಗಿದೆ. ಈ ಪುಸ್ತಕವನ್ನು ಪ್ರತಿಯೊಬ್ಬರು ಓದಲೇಬೇಕು. ಏಕೆಂದರೆ ಹಣವನ್ನು ಮನುಷ್ಯ ಮಾಡುವುದು ಮುಖ್ಯವಲ್ಲ; ಅದರ ಸದ್ಬಳಕೆ ಹೇಗೆ ಮಾಡಬೇಕು ಎಂಬುದರ ಸ್ಪಷ್ಟ ಚಿತ್ರಣ ಹಾಗೂ ಜ್ಞಾನ ನಮಗೆ ಈ ಪುಸ್ತಕದಿಂದ ಲಭಿಸುತ್ತದೆ.

₹250   ₹213

Buy Now
ನಿಮಗೆಷ್ಟು ಹಣ ಬೇಕು ಇಬುಕ್ | Nimageshtu Hana Beku Ebook

ಲೇಖಕರು, ಪತ್ರಕರ್ತರು ಆದ ಅನಂತ ಹುದೆಂಗಜೆ ಅವರು ಜನಸಾಮಾನ್ಯರ ನಾಡಿಮಿಡಿತವನ್ನು ಚೆನ್ನಾಗಿ ಅರ್ಥ ಮಾಡಿಕೊಂಡು ಸರಳ ಭಾಷೆ, ಶೈಲಿಯಲ್ಲಿ ಬರೆದಿರುವ ಪುಸ್ತಕವಿದು. ನಮ್ಮ ‘ಕನ್ನಡ ಮಾಣಿಕ್ಯ’ ಪತ್ರಿಕೆ ಸೇರಿದಂತೆ ವಿವಿಧ ಪತ್ರಿಕೆಗಳಲ್ಲಿ ಬರೆದಿರುವ ಲೇಖನಗಳ ಸಂಕಲನವೇ ಇದಾಗಿದೆ. ಇದೂ ಕೂಡ ಹಣಕಾಸು, ಬ್ಯಾಂಕಿಂಗ್ ಕ್ಷೇತ್ರದ ವಿಚಾರಗಳ ಕುರಿತ ಪುಸ್ತಕವಾಗಿದೆ. ಈ ಪುಸ್ತಕವನ್ನು ಪ್ರತಿಯೊಬ್ಬರು ಓದಲೇಬೇಕು. ಏಕೆಂದರೆ ಹಣವನ್ನು ಮನುಷ್ಯ ಮಾಡುವುದು ಮುಖ್ಯವಲ್ಲ; ಅದರ ಸದ್ಬಳಕೆ ಹೇಗೆ ಮಾಡಬೇಕು ಎಂಬುದರ ಸ್ಪಷ್ಟ ಚಿತ್ರಣ ಹಾಗೂ ಜ್ಞಾನ ನಮಗೆ ಈ ಪುಸ್ತಕದಿಂದ ಲಭಿಸುತ್ತದೆ.

₹250   ₹125

Buy Now
ನಿಶ್ಚಲವ ಕಲಕಿದ ಹಕ್ಕಿ | Nischalava Kalakida Hakki

ಆವರಣಗಳಿಂದ ಕಳಚಿಕೊಂಡ ಆತ್ಮದ ಹೊನಲು ಈ ಕವಿತೆಗಳಲ್ಲಿವೆ.. ವಿವರಿಸಲು ಹೋದರೆ ಮಾತು ಸೋಲುತ್ತದೆ. ಈ ಕವಿತೆಗಳನ್ನು ಓದಿದಾಗ, ಒಂದು ವಿಚಿತ್ರವಾದ ನಿರುಮ್ಮಳ ಶಾಂತ ಸ್ಥಿತಿಯ ಅನುಭೂತಿ ಉಂಟಾಗುತ್ತದೆ.

₹100   ₹75

Buy Now
ನಿಷಿತೆ | Nishite

ಪ್ರೀತಿನಿ ಧನಂಜಯ ಅವರ “ನಿಷಿತೆ”. ಈ ಕಾದಂಬರಿಯು ಮನೋವೈಜ್ಞಾನಿಕ ಥ್ರಿಲ್ಲರ್ ಆಗಿದ್ದು, ಪ್ರೀತಿನಿ ಅವರು ತಮ್ಮ ಮೊದಲ ಕೃತಿಯಲ್ಲೇ ಇಂಥದ್ದೊಂದು ಪ್ರಯೋಗಕ್ಕೆ ಅಣಿಯಾಗಿದ್ದು ಮೆಚ್ಚಬೇಕಾದ ಸಂಗತಿ. ದೆವ್ವ, ಭೂತ, ವಾಸ್ತವ, ಕಲ್ಪನೆ ಮತ್ತು ವೈಜ್ಞಾನಿಕ ವಿಷಯಗಳ ಸುತ್ತಲೇ ಸುತ್ತುವ ಈ ಕಾದಂಬರಿಯ ಮೂಲಕ ನಿಜಕ್ಕೂ ದೆವ್ವ ಭೂತಗಳಿಗೆ ಅಸ್ತಿತ್ವ ಇದೆಯೋ? ಇಲ್ಲವೋ? ಎನ್ನುವ ವೈಚಾರಿಕತೆಯ ಬೆಳಕು ಚೆಲ್ಲಲು ಲೇಖಕಿ ಪ್ರಯತ್ನಿಸಿದ್ದಾರೆ. ಎಷ್ಟೊಂದು ಸಿನೆಮಾಗಳನ್ನು ನೋಡಿದರೂ ದೆವ್ವ ಭೂತಗಳ ಬಗೆಗಿನ ಕುತೂಹಲ ತಣಿಯದವರಿಗೆ ಈ ಕೃತಿ ರಸಾನುಭವ ನೀಡಬಲ್ಲುದು ಮತ್ತು ಒಂದೊಳ್ಳೆ ಎಂಟರ್‌ಟ್ರೈನರ್ ಆಗಬಲ್ಲುದು.

₹250   ₹200

Buy Now
ನೀ ದೂರ ಹೋದಾಗ | Nee Dura Hodaga

ಮಂಗಳೂರು ನಗರ ಹಲವು ಬದುಕುಗಳ ವಿವಿಧ್ಯಮಯ ನಗರ. ವಿವಿಧ ಭಾಷೆ, ಸಂಸ್ಕೃತಿ, ಧರ್ಮ, ಹಾಗೂ ಪಾಕ ವೈವಿಧ್ಯತೆಗಳನ್ನು ಹಿತವಾಗಿ ತನ್ನ ಜನರಿಗೆ ದೊರಕಿಸುವ ಉದಾರನಗರ ಎನಿಸಿಕೊಂಡಿದೆ.

₹220   ₹176

Buy Now
ನೀಲಿ ಮತ್ತು ಸೇಬು | Neeli Mattu Sebu

ಹೆಣ್ಣು ಮತ್ತು ಮಣ್ಣಿಗೆ ಬಿಡಿಸಲಾರದ ಬಂಧ. ಹಾಗಾಗಿಯೇ ಜಗದ ಹೆಣ್ಣುಗಳ ಕಥೆಯನ್ನು ಹೆಣೆದರೆ ಅದು ಈ ನೆಲದ ಕಥೆಯೂ ಆಗಿರುತ್ತದೆ. ಹೆಣ್ಣ ಕಣ್ಣೋಟದಲ್ಲಿ ದಕ್ಕುವ ಸುತ್ತಲ ಜಗತ್ತಿನ ಚಿತ್ರಣವೇ ಬೇರೆ.

₹180   ₹144

Buy Now
ನೀಲಿ ಮತ್ತು ಸೇಬು ಇಬುಕ್ | Neeli Mattu Sebu Ebook

ಹೆಣ್ಣು ಮತ್ತು ಮಣ್ಣಿಗೆ ಬಿಡಿಸಲಾರದ ಬಂಧ. ಹಾಗಾಗಿಯೇ ಜಗದ ಹೆಣ್ಣುಗಳ ಕಥೆಯನ್ನು ಹೆಣೆದರೆ ಅದು ಈ ನೆಲದ ಕಥೆಯೂ ಆಗಿರುತ್ತದೆ. ಹೆಣ್ಣ ಕಣ್ಣೋಟದಲ್ಲಿ ದಕ್ಕುವ ಸುತ್ತಲ ಜಗತ್ತಿನ ಚಿತ್ರಣವೇ ಬೇರೆ.

₹180   ₹90

Buy Now
ನೀಲಿ ಶಾಯಿಯ ಕಡಲು | Neeli Shayiya Kadalu

ಗೊತ್ತಿದೆ, ಗೊತ್ತಾಗುತ್ತಿದೆ ಎಂಬ ಭಾಸವನ್ನು ಹುಟ್ಟಿಸುತ್ತಲೆ ಗೊತ್ತಿಲ್ಲದ ವಿಸ್ತಾರದ ಕಡೆಗೆ ಇಲ್ಲಿನ ಕವಿತೆಗಳು ತುಡಿಯುತ್ತವೆ.

₹120   ₹90

Buy Now
ನೀಲಿ ಶಾಯಿಯ ಕಡಲು ಇಬುಕ್ | Neeli Shayiya Kadalu Ebook

ಗೊತ್ತಿದೆ, ಗೊತ್ತಾಗುತ್ತಿದೆ ಎಂಬ ಭಾಸವನ್ನು ಹುಟ್ಟಿಸುತ್ತಲೆ ಗೊತ್ತಿಲ್ಲದ ವಿಸ್ತಾರದ ಕಡೆಗೆ ಇಲ್ಲಿನ ಕವಿತೆಗಳು ತುಡಿಯುತ್ತವೆ.

₹120   ₹60

Buy Now
ನೇರಳೆ ಐಸ್ಕ್ರೀಂ | Nerale Icecream

ಪ್ರಿಯ ಪ್ರಸಾದ್ ಚತುರ್ಮುಖ ಬಸದಿಯ ಕಲ್ಲ ಮೇಲೆ ಕೂತು ಪುಟ್ಟ ಚೀಲದಿಂದ ಬಿಟು, ಚಕ್ಕುಲಿ, ಬನ್ನುಗಳನ್ನು ಮುಖದ ಬಣ್ಣ, ತುಟಿಯ ಕೆಂಪು ಹಾಳಾಗದಂತೆ ತಿನ್ನುವ ಮರಿ ಮಹಿಷಾಸುರ "ವೇಷದ ಸಂತು". ನಿಗೂಢ ಮಳೆಯ ಕಾಡಿನಲ್ಲಿ ಕಂಬಳಿಕೊಪ್ಪೆ ಹಾಕಿಕೊಂಡು, ಅದೃಷ್ಟಕ್ಕಾಗಿ ಕಾದವನಂತೆ, ಕಲ್ಲಣಬೆಗಾಗಿ ಅಲೆಯುವ ನಿಚ್ಚು, ತನ್ನ ಸಿರಿಕಂಠದ ಭಾಗವತಿಕೆಯ ಯಕ್ಷಬಿಂಬಕೆ ತಾನೇ ಮಾರು ಹೋಗಿ, ತನ್ನನ್ನೇ ಕಳೆದುಕೊಂಡು ಕಂಗಾಲಾದ ಗಿರಿಧರ, ಇಂಥವರ ಕತೆಗಳನ್ನು ಕಣ್ಣಿಗೆ ಕಟ್ಟುವಂತೆ ಹೇಳಿದ್ದೀಯ. ಮೇಲ್ನೋಟಕ್ಕೆ ಒಂದು ಬಗೆಯ ವರ್ಣನಾತ್ಮಕ ಗುಣ ಈ ನಿರೂಪಣೆಗಳಲ್ಲಿ ಎದ್ದು ಕಂಡರೂ, ಸೂಕ್ಷ್ಮವಾಗಿ ನೋಡಿದರೆ ಅದು ಆಯಾ ಜೀವಿಗಳ ಖಾಸಗೀ ಜೀವನದ ದಾರುಣತೆಯ ವಿರೋಧಾಭಾಸವನ್ನು ಧ್ವನಿಸುತ್ತದೆ. ಹಬ್ಬದ ನೆಪದಲ್ಲಿ ಪುರಾಣದ ವೇಷಗಳನ್ನು ತೊಟ್ಟುಕೊಂಡು ಮನೆಮನೆಗೆ ಕಾಣಿಕೆಗಾಗಿ ಅಲೆಯುವುದು, ಕಲ್ಲಣಬೆಯ ರುಚಿ ಏನೆಂದೇ ತಿಳಿಯದವ ಅದನ್ನು ಅಲೆದಾಡಿ ಹಕ್ಕಿ ತಂದು ತನಗಾಗಿ ಒಂದನ್ನೂ ಉಳಿಸಿಕೊಳ್ಳದೇ ಪುಡಿಗಾಸಿಗೆ ಮಾರುವುದು, ಸಾರ್ವಜನಿಕರ ಕಣ್ಣಲ್ಲಿ ಏರುತ್ತ ಹೋದ ಕಲಾವಿದ ಅತ್ಮಮೋಹದ ನರಕಕ್ಕೆ ಜಾರುವುದು, ಇಂಥ ವಿರೋಧಾಭಾಸಗಳು ಈ ಕತೆಗಳ ಮುಖ್ಯ ಲಕ್ಷಣಗಳಾಗಿ ನನ್ನನ್ನು ತಟ್ಟಿದವು. ಮೊದಲೇ ಅಸ್ಪಷ್ಟವಾಗಿಯಾದರೂ ಮನಗಂಡಿರುವ ಕತೆಯನ್ನು ಆರಾಮಾಗಿ “ಎಲೆಗೆ ಸುಣ್ಣ ಹಚ್ಚುತ್ತ ಹೇಳುವ ಶೈಲಿ" ನಿನ್ನದು. ಹೀಗಾಗಿ ಚೂರೂ ಹದ ತಪ್ಪಿದರೂ ವಿರೋಧಾಭಾಸದ ಆ ಅಜ್ಞಾತ ನಾಡಿಬಿಂದು ಎಲ್ಲೋ ಹಗುರಾಗಿಬಿಡಬಹುದು, ಅಥವಾ ಮರೆಯಾಗಿಬಿಡಬಹುದು. ನಿನಗೂ ಗೊತ್ತಿರದ ಸಂಗತಿಗಳು ಬಂದು ಸೇರಿಕೊಳ್ಳಲು ನೀನು ಬಾಗಿಲುಗಳನ್ನು ತೆರೆದಿಟ್ಟುಕೊಂಡಾಗ ಮಾತ್ರ ಹೊಸತೊಂದು ಅನಿರೀಕ್ಷಿತ, ಅಸಂಗತ ಅಂಶ ಬಂದು ನಿನ್ನನ್ನು ಚಕಿತಗೊಳಿಸಬಹುದು. ಗಿರಿಧರನಿಗೆ ಅನಿಸುವಂತೆ, ಕಥನವೂ ಸಹ ಕಾಣದ ಕಡಲಿನೆಡೆಗೆ ಚಲಿಸುತ್ತಿರುವ ನದಿಯಂತೆ, ಅದು ತನ್ನ ದಂಡೆಯನ್ನು ತಾನೇ ರೂಪಿಸಿಕೊಳ್ಳುತ್ತದೆ. ನಿನ್ನ ಬರವಣಿಗೆ ನಿನ್ನನ್ನು ಒರೆಗೆ ಹಚ್ಚುತ್ತಲೇ ಇರಲಿ, ಹೊಸ ಹೊಸ ಅಸಂಗತ, ಅನಿರೀಕ್ಷಿತ ತಿರುವುಗಳಿಗೆ ತೆರೆದುಕೊಳ್ಳುತ್ತ ಜೀವಜಾಲದೊಂದಿಗಿನ ನಂಟನ್ನು ಒಳಗೊಳ್ಳುತ್ತ ಪ್ರವಹಿಸಲಿ, ಜಯಂತ ಕಾಯ್ಕಿಣಿ

₹225   ₹191

Buy Now
ಪತ್ರಕರ್ತನ ಪಯಣ | Patrakartana Payana

ಹಿರಿಯರಾದ ಕೊಡಸೆ ಸರ್. ನಾನು ಅದೆಷ್ಟೋ ಸಲ ನನ್ನಲ್ಲಿಯೇ ಅಂದುಕೊಂಡದ್ದಿದೆ. ಪ್ರತಿಭೆ ಮತ್ತು ಕಠಿಣ ಶ್ರಮ ಎರಡೂ ಒಟ್ಟಿಗೇ ಸೇರಿದರೆ ಏನಾಗಬಹುದು ಎಂಬುದಕ್ಕೆ ನೀವೊಂದು ತಾಜಾ ಉದಾಹರಣೆಯಾಗಿ ನಿಲ್ಲಬಲ್ಲರಿ!! ನೀವು ಪತ್ರಿಕಾ ಕ್ಷೇತ್ರದಲ್ಲಿ ನಿಮ್ಮ ಬರವಣಿಗೆಯಿಂದ, ಪ್ರಾಮಾಣಿಕ ಕೆಲಸದಿಂದ, ಕರ್ತೃತ್ವಶಕ್ತಿಯಿಂದ, ಜಾಣ್ಯ, ದಕ್ಷತೆಗಳಿಂದ, ಹುರುಪು, ಹುಮ್ಮಸ್ಸಿನಿಂದ, ನಿರಂತರ ಚಿಂತನಶೀಲತೆಯಿಂದ, ಕಳಕಳಿ-ಕಾಳಜಿಯಿಂದ. ಕರ್ತವ್ಯ ನಿಷ್ಠೆಯಿಂದ ಮಾಡಿರುವ ಸೇವೆ ಅನುಪಮವಾದುದು. ಪ್ರೊ. ಓಂಕಾರ ಕಾಕಡೆ

₹375   ₹319

Buy Now
ಪರದೆ ಮತ್ತಿತ್ತರ ಕಥೆಗಳು ಇಬುಕ್ | parade mattitara kathegalu Ebook

ಪ್ರಸನ್ನ ಅವರ ಪ್ರಮುಖ ಕಾಳಜಿ ಮನುಷ್ಯ ಭಿನ್ನ-ಭಿನ್ನ ಕಾಲಗಳಲ್ಲಿ ಹಿಮ ಸನ್ನಿವೇಶಗಳಲ್ಲಿ ಹೇಗೆ ಮತ್ತು ಎಷ್ಟು ಭಿನ್ನವಾಗಿ ನಡೆದುಕೊಳ್ಳುತ್ತಾನೆ ಎನ್ನುವುದನ್ನು ಅನ್ವೇಷಿಸುವುದು ಆಗಿದೆ. ಈ ಅನ್ವೇಷಣೆ ಸಾಧಾರಣವಾಗಿ ಮಧ್ಯಮ ವರ್ಗದ ಬದುಕಿನ ವ್ಯವಸ್ಥೆಯಲ್ಲಿ ಸಿಲುಕಿರುವ ಜನಗಳ ಮನೋಭಾವದ ಅನ್ವೇಷಣೆಯೇ ಆಗಿದೆ. ಈ ಗುಂಪಿನಲ್ಲಿ ಸರ್ಕಾರಿ ಮತ್ತು ವಿವಿಧ ಉದ್ಯೋಗಗಳಲ್ಲಿ ತೊಡಗಿಕೊಂಡವರು. ನಿವೃತ್ತರು, ರಾಜಿನಾಮೆ ಕೊಟ್ಟವರು ಮುಂತಾದವರೆಲ್ಲ ಇದ್ದಾರೆ. ಅವರು ಇರುವುದು ತಮ್ಮ ತಮ್ಮ ದೌರ್ಬಲ್ಯಗಳ ಪ್ರತೀಕಗಳಾಗಿಯೇ ಹೌದು. ದೌರ್ಬಲ್ಯಗಳನ್ನು ಎದುರುಗೊಳ್ಳುವ, ಅದನ್ನು ನಿರ್ವಿಣ್ಣರಾಗಿ ಒಪ್ಪಿಕೊಳ್ಳುವ, ಎದುರಿಸುವ ಎಲ್ಲ ಬಗೆಯ ಜನಗಳನ್ನು ನಾವು ಈ ಕಥೆಗಳಲ್ಲಿ ಮುಖಾಮುಖಿಯಾಗುತ್ತೇವೆ.

₹230   ₹115

Buy Now
ಪರಸ್ಪರ ಮತ್ತಿತರ ಕತೆಗಳು | Paraspara Mattitara Kathegalu

ವಿಶಿಷ್ಟ ಸಂವೇದನೆಗಳಿಂದ ರೂಪುಗೊಂಡ ಈ ಕಥೆಗಳನ್ನು ಒಂದು ಸೀಮಿತ ಸಾಹಿತ್ಯದ ವಾದದ ಚೌಕಟ್ಟಿಗೆ ತಂದು ಕೂಡಿಸುವದು ಸಾಧ್ಯವಾಗುವದಿಲ್ಲ. ಬಹುತೇಕ ಎಲ್ಲಾ ಕಥೆಗಳು ಭಾರತದ ಸಾಮುದಾಯಿಕ ಪ್ರಜ್ಞೆಯನ್ನು ಎತ್ತಿ ಹಿಡಿದಿವೆ

₹150   ₹120

Buy Now
ಪರಸ್ಪರ ಮತ್ತಿತರ ಕತೆಗಳು ಇಬುಕ್ | Paraspara Mattitara Kathegalu Ebook

ವಿಶಿಷ್ಟ ಸಂವೇದನೆಗಳಿಂದ ರೂಪುಗೊಂಡ ಈ ಕಥೆಗಳನ್ನು ಒಂದು ಸೀಮಿತ ಸಾಹಿತ್ಯದ ವಾದದ ಚೌಕಟ್ಟಿಗೆ ತಂದು ಕೂಡಿಸುವದು ಸಾಧ್ಯವಾಗುವದಿಲ್ಲ. ಬಹುತೇಕ ಎಲ್ಲಾ ಕಥೆಗಳು ಭಾರತದ ಸಾಮುದಾಯಿಕ ಪ್ರಜ್ಞೆಯನ್ನು ಎತ್ತಿ ಹಿಡಿದಿವೆ

₹150   ₹75

Buy Now
ಪರಿಸರ ನಿಘಂಟು | Parisara Nighantu

...ಒಂದು ಶಾಸ್ತ್ರನಿರ್ಮಾಣಕ್ಕೆ ನೆರವಾಗಬಲ್ಲ ಪದಗಳ ಪ್ರಪಂಚವನ್ನೇ ಪರಿಚಯ ಮಾಡಿಕೊಡುವ 'ಪರಿಸರ ನಿಘಂಟು' ಇದೀಗ ಇಬ್ಬರು ತರುಣ ಮಿತ್ರರ ಸಾಹಸದ ಪರಿಣಾಮವಾಗಿ ಕನ್ನಡದಲ್ಲಿ ಮೊಟ್ಟಮೊದಲಿಗೆ ಸಿದ್ಧವಾಗಿದೆ. ...ಇದು ಪರಿಸರ ವಿಜ್ಞಾನಕ್ಕೆ ಸಂಬಂಧಪಟ್ಟ ಕೇವಲ ಪಾರಿಭಾಷಿಕ ಪದಗಳ ನಿಘಂಟಲ್ಲ; ಒಟ್ಟಾರೆಯಾಗಿ ಪರಿಸರ ವಿಜ್ಞಾನದ 'ಭಾಷಿಕ ನಿಘಂಟು', ಕನ್ನಡದಲ್ಲಿ ಪರಿಸರ ವಿಜ್ಞಾನವನ್ನು ತಿಳಿದುಕೊಳ್ಳಬೇಕೆನ್ನುವವರಿಗೆ, ಬರೆಯಬೇಕೆನ್ನುವವರಿಗೆ ಈ ಕುರಿತ ಜಾಗತಿಕ ತಿಳುವಳಿಕೆಯನ್ನು ಹಿಡಿದಿರಿಸಿದ ಭಾಷೆಯನ್ನು ಪರಿಚಯ ಮಾಡಿಕೊಡುವ ನಿಘಂಟು. ಆದ ಕಾರಣವೇ ಈ ನಿಘಂಟುಕಾರರ ಉದ್ದೇಶ, ಪರಿಸರ ವಿಜ್ಞಾನಕ್ಕೆ ಸಂಬಂಧಪಟ್ಟ ಯಾವುದೇ ಪದಕ್ಕೆ ಇರಬಹುದಾದ ಅರ್ಥವನ್ನು ಸೂಚಿಸಿ ವಿರಮಿಸುವಷ್ಟಕ್ಕೆ ಸೀಮಿತವಾಗಿಲ್ಲ.. -ರಾಷ್ಟ್ರಕವಿ ಡಾ.ಜಿ.ಎಸ್.ಶಿವರುದ್ರಪ್ಪ ಡಾ. ಟಿ.ಎಸ್. ವಿವೇಕಾನಂದ.. ಪರಿಸರವಾದವನ್ನು ಸೃಜನಾತ್ಮಕವಾಗಿ ಪುನರಾವಲೋಕನಕ್ಕೊಳಪಡಿಸಿದ ಮಹತ್ವದ ಕೃತಿ 'ಭೂಮಿಗೀತೆ', ತೇಜಸ್ವಿಯವರೊಂದಿಗೆ ಕೂಡಿ ಮಾಡಿದ 'ಕಿರಿಯರಿಗಾಗಿ ಪರಿಸರ', ಭಾರತದ ವೃಕ್ಷಗಳನ್ನು ಕುರಿತು ನಿರ್ಮಿಸಿದ 'ಹಸಿರ ಕೊಳಲು', ಹಂಪಿ ವಿಶ್ವವಿದ್ಯಾಲಯದ ಡಿ.ಲಿಟ್ ಪದವಿಯನ್ನು ದೊರಕಿಸಿಕೊಟ್ಟ ಅಧ್ಯಯನದ ಪುಸ್ತಕರೂಪ 'ಪರಿಸರ ಕಥನ' ಇವರ ಮಹತ್ವದ ಕೃತಿಗಳಲ್ಲಿ ಕೆಲವು. ಹಲವಾರು ಬಹುಮಾನಿತ ಕಥೆ, ಪದ್ಯಗಳೊಂದಿಗೆ ಜಿಮ್ ಕಾರ್ಬೆಟ್‌ರ ಇಡೀ ಶಿಕಾರಿ ಕಥೆಗಳ ಕನ್ನಡ ರೂಪಾಂತರ ಇವರ ಹೆಸರಿನಲ್ಲಿದೆ. ಭೂಮಿಗೀತೆ ಕೃತಿಗಾಗಿ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದಿರುವ ಇವರ ಮಹತ್ವಾಕಾಂಕ್ಷೆಯ ಪ್ರಯತ್ನ 'ಪರಿಸರ ನಿಘಂಟು' ಭಾರತೀಯ ಭಾಷೆಗಳಲ್ಲಿಯೇ ಮೊದಲ ಪ್ರಯತ್ನ. ಇದು ಕನ್ನಡದ ಪರಿಸರ ಸಾಹಿತ್ಯದಲ್ಲಿಯೇ ಒಂದು ನಿರ್ಣಾಯಕ ಮೈಲುಗಲ್ಲು ಸಹ ಸಂಪಾದಕರಾದ ಶೇಷಗಿರಿ ಜೋಡಿದಾ‌ರ್ ಈ ಪ್ರಯತ್ನದ ಜೊತೆಗಾರ. -ಪ್ರೊ. ಕಿ.ರಂ. ನಾಗರಾಜ,

₹625   ₹531

Buy Now
ಪಿಂಕ್ ಮುಜಾಂಡಾ | pink mujanda

ಫಲ್ಗುಣಿ ಎಂಬ ಮಿಸ್ಟೀರಿಯಸ್ ಹುಡುಗಿ ಏನಾಗಬೇಕು ನನ್ನ ಬದುಕಿಗೆ? ಅಂದು ಅವಳ ಕಾರಣದಿಂದಲೇ ಸಮ್ಯಕ್ ನಿಂದ ಸಂಬಂಧ ಕಡಿದುಕೊಂಡೆ. ಇಂದು ಅವಳು ಕರೆದಿದ್ದಕ್ಕೆ ಮತ್ತದೇ ಹಳೆಯ ಜಾಗಕ್ಕೆ ಹೋಗುತ್ತಿದ್ದೇನೆ. ನಾವು ಭೇಟಿಯಾಗೋ ಪ್ರತಿ ವ್ಯಕ್ತಿಯೂ ಯಾವುದೋ ಉದ್ದೇಶಕ್ಕೆ ನಮಗೆ ಸಿಕ್ಕಿರುತ್ತಾರೆ ಅಂತಾರಲ್ಲ? ನಿಜವೇ? ಇರಲಾರದು. ನಮಗಾಗಿ ಯಾರು ಹೀಗೆಲ್ಲಾ ಪ್ಲಾನ್ ಮಾಡುತ್ತಾರೆ! ಎಲ್ಲವೂ ಕೋ-ಇನಸಿಡೆನ್ಸ್ ಅಷ್ಟೇ. ಲೈಫ್ ಇಸ್ ಅ ಕಲೆಕ್ಷನ್ ಆಫ್ ರಾಂಡಮ್ ಇನ್ಸಿಡೆನ್ಸ್ ಹೆಚ್ಚಿನ ಅರ್ಥಗಳನ್ನು ನಾವೇ ಕಂಡುಕೊಂಡು ಅದರೊಳಗೊಂದು ಸಣ್ಣ ಥ್ರಿಲ್ ಅನುಭವಿಸುತ್ತಿರುತ್ತೇವೆ ಮೇ ಬಿ?...

₹190   ₹152

Buy Now