ಡಾ. ಚಂದ್ರಶೇಖರ ಕಂಬಾರ

ಡಾ. ಚಂದ್ರಶೇಖರ ಕಂಬಾರ (ಜನನ – ಜನವರಿ ೨, ೧೯೩೭) ಬೆಳಗಾವಿ ಜಿಲ್ಲೆ ಘೋಡಿಗೇರಿ ಗ್ರಾಮದಲ್ಲಿ ಬಸವಣ್ಣೆಪ್ಪ ಕಂಬಾರ ಹಾಗೂ ಚೆನ್ನಮ್ಮ ದಂಪತಿಯ ಪುತ್ರನಾಗಿ ಜನಿಸಿದರು. ಗೋಕಾಕ್ ನ ಮುನ್ಸಿಪಲ್ ಪ್ರೌಢಶಾಲೆಯಲ್ಲಿ ಹೈಸ್ಕೂಲ್ ಶಿಕ್ಷಣ ಪಡೆದರು. ಬಳಿಕ ಬೆಳಗಾವಿ ಲಿಂಗರಾಜ ಕಾಲೇಜಿನಲ್ಲಿ ಬಿಎ ಪದವಿ, ೧೯೬೨ರಲ್ಲಿ ‘ಕರ್ನಾಟಕ ವಿವಿ’ಯಿಂದ ಎಂ.ಎ ಪದವಿ ಹಾಗೂ ಪಿ.ಎಚ್.ಡಿ.ಪದವಿ ಪಡೆದಿದ್ದಾರೆ.

ಇವರು ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ. ಚಿಕಾಗೊ, ನ್ಯೂಯಾರ್ಕ್, ಬರ್ಲಿನ್, ಮಾಸ್ಕೋ, ಜಪಾನ್ ಮುಂತಾದೆಡೆಗಳ ಕೆಲವು ವಿಶ್ವವಿದ್ಯಾನಿಲಯಗಳಲ್ಲಿ ಜಾನಪದ ಮತ್ತು ರಂಗಭೂಮಿ ಕುರಿತ ಉಪನ್ಯಾಸಗಳನ್ನು ನೀಡಿರುವ ಹೆಗ್ಗಳಿಕೆ ಇವರದು.