ವಸುಮತಿ ಉಡುಪ

ಲೇಖಕಿ ವಸುಮತಿ ಉಡುಪ ಅವರು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಕಿರಣಕೆರೆಯಲ್ಲಿ 1948 ಏಪ್ರಿಲ್ 18ರಂದು ಜನಿಸಿದರು. ತಾಯಿ ತ್ರಿಪುರಾಂಬ, ತಂದೆ ರಂಗಾಭಟ್ಟರು. ತೀರ್ಥಹಳ್ಳಿಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದಾರೆ. ಇವರು ಬರೆದ ಕಥೆಗಳು ಕರ್ನಾಟಕದ ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿವೆ.